ಗದಗ : ಶಾಲಾ ಕಟ್ಟಡದ ಗುಣಮಟ್ಟ ಸುರಕ್ಷತಾ ಪ್ರಮಾಣಪತ್ರ ನೀಡಲು ಲಂಚ ಕೇಳಿದ್ದ ಜಿಲ್ಲಾಮಟ್ಟದ ಅಧಿಕಾರಿಯೊಬ್ಬರು ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ನಗರದ ಎಪಿಎಂಸಿ ಆವರಣದಲ್ಲಿರುವ ಅಗ್ನಿಶಾಮಕ ದಳ ಕಚೇರಿಯಲ್ಲಿ ನಡೆದಿದೆ.
ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಎಸ್ ಎಸ್ ಕೂಡ್ಲಮಠ ಶಾಲಾ ಕಟ್ಟಡದ ಗುಣಮಟ್ಟ ಸುರಕ್ಷತಾ ಪ್ರಮಾಣ ಪತ್ರ ನೀಡಲು ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಎಂಬುವರು ಏಳು ಸಾವಿರ ಲಂಚ ಕೇಳಿದ್ದರು. ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯ ಸಿ. ಬಿ ಮೊಗಲಿ ಎಂಬುವವರು ಲೋಕಾಯುಕ್ತಗೆ ದೂರು ನೀಡಿದ್ದಾರೆ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ, ಡಿವೈಎಸ್ಪಿ ಶಂಕರ ಎಮ್ ರಾಗಿ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರಗಳಾದ ರವಿ ಪುರುಷೋತ್ತಮ್ ಹಾಗೂ ಆಜೀಜ್ ಕಲಾದಗಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ವಿರೂಪಾಕ್ಷ ಅರಿಷಿಣದ, ಎಸ್ ಎಸ್ ಅಮರಶೆಟ್ಟಿ, ಮಂಜುನಾಥ್ ಗಾರ್ಗಿ, ಲಕ್ಕನಗೌಡರ್, ಗುಬ್ಬಿ ಚಾಲಕರಾದ ನೈನಾಪೂರ ಹಾಗೂ ಹೆಬ್ಬಳ್ಳಿ ಇದ್ದರು.
ಇದನ್ನೂ ಓದಿ : ಸಚಿವರ ಕಾರ್ಯಕ್ರಮ ಭದ್ರತೆಗೆ ಆಗಮಿಸುತ್ತಿದ್ದ ಡಿಆರ್ ವಾಹನ ಪಲ್ಟಿ : ಮೂವರಿಗೆ ಗಾಯ