ಗದಗ: ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ಎಸ್ ಸಂಗ್ರೇಶಿ ಅವರು ಕೈದಿಗಳಿಗೆ ಮತ್ತು ಕಾರಾಗೃಹ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್, ಸೋಪ್ ಇರುವ ಕಿಟ್ ವಿತರಿಸಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಸ್.ಜಿ.ಸಲಗರೆ, ಕಾರಾಗೃಹದ ಡಿವೈಎಸ್ಪಿ ನಾಗರತ್ನಾ ಸೇರಿದಂತೆ ಸಿಬ್ಬಂದಿ ಇದ್ದರು.