ಗದಗ: ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ಸಂಗೀತ ಪ್ರಶಸ್ತಿ ಸ್ಥಾಪನೆ ಮಾಡಿ, ಆದೇಶ ಹೊರಡಿಸಿದೆ. ಇದರಿಂದ ಗದಗನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಸಂಭ್ರಮ ಇಮ್ಮಡಿಗೊಂಡಿದೆ.
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಕನಿಷ್ಠ 25 ರಿಂದ 30 ವರ್ಷ ಕಾಲ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಶಸ್ತಿ ವಿಜೇತರಿಗೆ 10 ಲಕ್ಷ ರೂ ಬಹುಮಾನ ಪ್ರಶಸ್ತಿ ಸ್ಮರಣಿಕೆ, ಪ್ರಶಸ್ತಿ ಫಲಕ, ಶಾಲು, ಹಾರ ಫಲ ತಾಂಬೂಲ ನೀಡಲಾಗುತ್ತದೆ. ಇನ್ನು ಪ್ರಶಸ್ತಿ ಸ್ಥಾಪನೆ ಮಾಡಿದ್ದಕ್ಕೆ ರಾಜ್ಯ ಸರ್ಕಾರಕ್ಕೆ ಪೀಠಾಧಿಪತಿ ಶ್ರೀ ಕಲ್ಲಯ್ಯಜ್ಜನವರು ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: SSLCಯಲ್ಲಿ 625ಕ್ಕೆ 625: ಹಾವೇರಿಯಲ್ಲಿ ಅಟೆಂಡರ್ ಮಗಳು ಟಾಪರ್