ಗದಗ: ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ.
ಈರನಗೌಡ (40) ಮೃತ ರೈತ, ಗ್ರಾಮ ಶಕ್ತಿ ಸಂಘದಲ್ಲಿ 5 ಲಕ್ಷ , KVG ಬ್ಯಾಂಕ್ನಲ್ಲಿ 1 ಲಕ್ಷ ಸೇರಿ ಸಾಕಷ್ಟು ಕೈಸಾಲ ಮಾಡಿಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈತ ಕ್ರಿಮಿನಾಶಕ ಸೇವಿಸಿದ್ದ.
ಈಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ರೈತ ಮೃತಪಟ್ಟಿದ್ದಾನೆ. ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.