ಗದಗ: ಅಪರಿಚಿತ ವಾಹನ ಡಿಕ್ಕಿ ಹೊಡೆದು ರೈತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ಬಳಿ ನಡೆದಿದೆ.
ಕೊಣ್ಣೂರು ಗ್ರಾಮದ ರೈತ ವೆಂಕಪ್ಪ ಪೂಜಾರ್(65) ಮೃತ ದುರ್ದೈವಿ.ಹೊಲಕ್ಕೆ ಹೋಗಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳಿ ಬರುವ ವೇಳೆ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
ಈ ಸಂಬಂಧ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.