ಗದಗ: ಕಡಲೆ ಬೆಳೆಗೆ ನ್ಯಾಯಯುತವಾಗಿ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿ ರೈತ ಹಿತಾಭಿವೃದ್ದಿ ಸಂಘ ಒಕ್ಕಲಗೇರಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಗದಗ ಜಿಲ್ಲೆಯಲ್ಲಿ ಈ ವರ್ಷ ಅತಿವೃಷ್ಟಿ, ಅನಾವೃಷ್ಠಿ ಸಂಭವಿಸಿದೆ. ಹೀಗಾಗಿ ಕಡಲೆ ಬೆಳೆಯ ಇಳುವರಿಯಲ್ಲಿ ಕುಂಠಿತವಾಗಿದೆ. ಕಡಲೆ ಬೆಳೆಗೆ ಯೋಗ್ಯ ಬೆಲೆ ನೀಡಬೇಕು ಮತ್ತು ರೈತ ಬೆಳೆದಂತಹ ಇತರೆ ಬೆಳೆಗಳಿಗೆ ಯೋಗ್ಯವಾದ ಬೆಲೆ ಇಲ್ಲದ ಹಿನ್ನೆಲೆ ಕೂಡಲೇ ಬೆಂಬಲ ಬೆಲೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಅನಂತರ ಈ ಕುರಿತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ರು.