ಗದಗ: ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಶಕ್ತಿ ಖಾಸಗೀಕರಣ, ಕಾರ್ಮಿಕರ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಇಲ್ಲಿನ ರಿಂಗ್ ರೋಡ್ ಸರ್ಕಲ್ನ ಹೆದ್ದಾರಿಯಲ್ಲಿ ಮಲಗುವ ಮೂಲಕ ರಸ್ತೆ ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಕಾಯ್ದೆ ತಿದ್ದುಪಡಿ ಮಾಡಿವೆ. ಇದು ಭೂ ಸುಧಾರಣೆ ಕಾಯ್ದೆಯಲ್ಲ, ರೈತರ ಮರಣ ಶಾಸನ ಎಂದು ಹರಿಹಾಯ್ದರು.
ಕೂಡಲೇ ಈ ಎಲ್ಲಾ ಶಾಸನಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಿ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.