ETV Bharat / state

ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ವಿಧಿಸಿರುವ ನಿರ್ಬಂಧ ತೆಗೆದುಹಾಕಲು ಸಿದ್ದರಾಮಯ್ಯ ಒತ್ತಾಯ - ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿ

ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ವಿಧಿಸಿರುವ ನಿರ್ಬಂಧ ತೆಗೆದುಹಾಕಲು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬೊಮ್ಮಾಯಿಗೆ ಪತ್ರ ಬರೆಯುವುದರ ಮೂಲಕ ಒತ್ತಾಯಿಸಿದ್ದಾರೆ. ಇದಲ್ಲದೇ ಅವರು ನರಗುಂದದಲ್ಲಿ ಕೊಲೆಯಾದ ಯುವಕನ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

congress leader Siddaramaiah letter to CM Bommai, Siddaramaiah letter to CM Bommai over Millet price issue, Former cm Siddaramaiah news, Siddaramaiah visit to Naragund, ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಪತ್ರ, ರಾಗಿ ಬೆಲೆ ವಿಚಾರವಾಗಿ ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ, ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿ, ನರಗುಂದಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ,
ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ವಿಧಿಸಿರುವ ನಿರ್ಬಂಧ ತೆಗೆದುಹಾಕಲು ಸಿದ್ದರಾಮಯ್ಯ ಒತ್ತಾಯ
author img

By

Published : Jan 26, 2022, 7:39 AM IST

ಬೆಂಗಳೂರು: ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿಸಲು ವಿಧಿಸಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಗಿ, ಭತ್ತ ಮುಂತಾದ ಉತ್ಪನ್ನಗಳಿಗೆ ನಿಗದಿ ಮಾಡಿರುವ ಬೆಲೆಯನ್ನು ಹೆಚ್ಚಿಸಬೇಕೆಂದು ಅವರು ಪತ್ರದ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇಡೀ ವರ್ಷ ಪದೇ ಪದೇ ಸುರಿದ ಮಳೆಯ ನಡುವೆಯೂ ರಾಗಿ, ಭತ್ತ ಮುಂತಾದ ಬೆಳೆಗಳನ್ನು ಕೊಯಿಲು ಮಾಡಿ ಮಾರುಕಟ್ಟೆಗೆ ತರುತ್ತಿದ್ದಾರೆ.

ಸರ್ಕಾರವು ಈ ವರ್ಷ ಜನವರಿ 1 ರಿಂದ ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಗಳ ಪ್ರಮುಖ ಬೆಳೆಯಾದ ರಾಗಿ ಬೆಳೆಯುತ್ತಾರೆ ಎಂದಿದ್ದಾರೆ.

ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ವಿಧಿಸಿರುವ ನಿರ್ಬಂಧ ತೆಗೆದುಹಾಕಲು ಸಿದ್ದರಾಮಯ್ಯ ಒತ್ತಾಯ

ಕೃಷಿ ಇಲಾಖೆ ಅಂದಾಜಿನ ಪ್ರಕಾರ ನಮ್ಮ ರೈತರು ಈ ವರ್ಷ ಸುಮಾರು 17.5 ಲಕ್ಷ ಎಕರೆ ಪ್ರದೇಶದಲ್ಲಿ ರಾಗಿ ಬೆಳೆದಿದ್ದಾರೆ. ಕೃಷಿ ಇಲಾಖೆಯ ದಾಖಲೆಗಳ ಪ್ರಕಾರ ಈ ಬಾರಿ ಕನಿಷ್ಠ ಎಂದರೂ 14-15 ಲಕ್ಷ ಟನ್ ಇಳುವರಿಯ ನಿರೀಕ್ಷೆ ಮಾಡಲಾಗಿದೆ. ಆದರೆ, ಅತಿವೃಷ್ಟಿಯ ಕಾರಣದಿಂದ ದೊಡ್ಡ ಮಟ್ಟದ ಬೆಳೆ ನಷ್ಟವಾಗಿತ್ತು. ಆದರೂ ರೈತರು ಬೆಂಬಲ ಬೆಲೆಯಡಿ ರಾಗಿಯನ್ನು ಮಾರಾಟ ಮಾಡಲು ಉತ್ಸಾಹ ತೋರಿಸುತ್ತಿದ್ದಾರೆ ಎಂದರು.

ಓದಿ: 73ನೇ ಗಣತಂತ್ರ ದಿನದ ಸಂಭ್ರಮ... ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ

ಮಾತೆತ್ತಿದರೆ ರೈತರ ಆದಾಯ ದ್ವಿಗುಣ ಗೊಳಿಸಲಾಗುವುದು ಎಂದು ಮಾತನಾಡುವ ಪ್ರಧಾನಿ ಮೋದಿಯವರ ಸರ್ಕಾರ ಈ ಬಾರಿ ರಾಜ್ಯದ ರೈತರಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಮಾತ್ರ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ ಎಂದು ವಿವರಿಸಿದ್ದಾರೆ.

ಈ ಸೂಚನೆಯನ್ನು ಆಧರಿಸಿ ರಾಜ್ಯದ ಬಿಜೆಪಿ ಸರ್ಕಾರವು ರೈತರಿಂದ ರಾಗಿ ಖರೀದಿಸಲು ವಿಪರೀತ ನಿಬಂಧನೆಗಳನ್ನು ವಿಧಿಸಿದೆ. ಅದರಲ್ಲಿ ಒಬ್ಬ ರೈತರಿಂದ ಕೇವಲ 20 ಕ್ವಿಂಟಾಲ್ ರಾಗಿಯನ್ನು ಮಾತ್ರ ಖರೀದಿ ಮಾಡಲಾಗುವುದೆಂದು ತಿಳಿಸಿ ಆದೇಶ ಹೊರಡಿಸಿದೆ.

ಯೂಕಲಿಪ್ಟಸ್ ಬೆಳೆಯನ್ನು ಬೆಳೆಯುತ್ತಿದ್ದ ರೈತರು ಕಳೆದ ಎರಡು ವರ್ಷಗಳಿಂದ ಈಚೆಗೆ ತಮ್ಮ ಹೊಲಗಳಲ್ಲಿ ಬೆಳೆದಿದ್ದ ಯೂಕಲಿಪ್ಟಸ್ ಬೆಳೆಯನ್ನು ತೆಗೆದು ಹಾಕಿ ರಾಗಿ ಬೆಳೆಯಲಾರಂಭಿಸಿದ್ದಾರೆ. ಹಾಗಾಗಿ ಸಹಜವಾಗಿಯೆ ರಾಗಿಯ ಉತ್ಪಾದನೆ ಹೆಚ್ಚಾಗಿದೆ. ರಾಗಿಗೆ ನೀಡುತ್ತಿರುವ ಬೆಂಬಲ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಂದು ಕ್ವಿಂಟಾಲಿಗೆ ಕೇವಲ 82 ರೂಪಾಯಿಗಳಷ್ಟು ಮಾತ್ರ ಏರಿಕೆ ಮಾಡಲಾಗಿದೆ ಎಂದಿದ್ದಾರೆ.

ಕಳೆದ ವರ್ಷ ಒಂದು ಕ್ವಿಂಟಾಲಿಗೆ 3,295 ರೂ ನೀಡುತ್ತಿದ್ದರೆ ಈ ವರ್ಷ 3,377 ಗಳಿಗೆ ಏರಿಕೆ ಮಾಡಲಾಗಿದೆ. ಆದರೆ, ರೈತರು 2019-20 ರಲ್ಲಿ ಟ್ರ್ಯಾಕ್ಟರ್​​​​ನಲ್ಲಿ ಒಂದು ಗಂಟೆ ಹೊಲ ಊಳಲು 750 ರೂಪಾಯಿ ನೀಡುತ್ತಿದ್ದರೆ ಈ ವರ್ಷ 1250-1300 ರೂ ನೀಡಬೇಕಾಗಿದೆ.

ಬೆಳೆ ಕಟಾವು ಮಾಡುವ ಯಂತ್ರಕ್ಕೆ ಕೂಡ ಗಂಟೆಗೆ ಸುಮಾರು 750 ರೂಪಾಯಿಗಳಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ಅವಶ್ಯ ವಸ್ತುಗಳ ಬೆಲೆ ಏರಿಕೆಯಾಗಿವೆ. ರೈತರು ಬಳಸುವ ಪ್ಲಾಸ್ಟಿಕ್ ಮುಂತಾದ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಸಹ ಹೆಚ್ಚಿಸಲಾಗಿದೆ. ಇದೆಲ್ಲದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಉತ್ಪಾದನಾ ವೆಚ್ಚ ಸಿಕ್ಕಾಪಟ್ಟೆ ಹೆಚ್ಚಾಗಿದೆ ಎಂದು ವಿವರಿಸಿದ್ದಾರೆ.

ಓದಿ: 73ನೇ ಗಣರಾಜ್ಯೋತ್ಸವ... ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

ಡಾ.ಸ್ವಾಮಿನಾಥನ್ ಅವರ ವರದಿಯಲ್ಲಿನ ಸೂತ್ರಗಳನ್ನು ಪೂರ್ತಿಯಾಗಿ ಅಳವಡಿಸಿದರೆ ಒಂದು ಕ್ವಿಂಟಾಲ್ ರಾಗಿಗೆ ಈಗ ನಿಗದಿಪಡಿಸಿರುವ ಬೆಂಬಲ ಬೆಲೆಯ ಎರಡರಷ್ಟನ್ನು ರೈತರಿಗೆ ನೀಡಬೇಕಾಗುತ್ತದೆ. ದೊಡ್ಡಬಳ್ಳಾಪುರ ಮುಂತಾದ ಕಡೆ ರೈತರು, ರೈತ ಸಂಘದವರು ರಾಗಿ ಖರೀದಿಗೆ ವಿಧಿಸಿರುವ ನಿಬಂಧನೆಗಳನ್ನು ತೆಗೆದು ಹಾಕುವಂತೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಕಳೆದ ವರ್ಷ ಸುಮಾರು 4.7 ಲಕ್ಷ ಟನ್ ಗಳಷ್ಟು ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದರೆ ಈ ಬಾರಿ ರಾಜ್ಯದಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಖರೀದಿಸಲು ಮಾತ್ರ ರಾಜ್ಯಕ್ಕೆ ಅನುಮತಿ ನೀಡಲಾಗಿದೆ ಎಂದರು.

ರೈತರು 14-15 ಲಕ್ಷ ಟನ್ ರಾಗಿ ಬೆಳೆದರೆ ಅವರು ತಮ್ಮ ಸ್ವಂತ ಬಳಕೆಗೆ ಶೇ.50 ರಷ್ಟನ್ನು ಬಳಸುತ್ತಾರೆಂದರೆ ಉಳಿದದ್ದನ್ನು ಅವರು ಮಾರಲೇಬೇಕು. ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರೈತರ ಉತ್ಪನ್ನಗಳನ್ನು ಖರೀದಿಸದಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ.

ರೈತರು ಎಷ್ಟು ಕ್ವಿಂಟಾಲ್ ಖರೀದಿ ಕೇಂದ್ರಗಳಿಗೆ ತರುತ್ತಾರೊ ಅಷ್ಟನ್ನೂ ಖರೀದಿಸಬೇಕು. ಇಂದೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೇವಲ 2.10 ಲಕ್ಷ ಟನ್ ಖರೀದಿಸಲು ವಿಧಿಸಿರುವ ನಿರ್ಬಂಧವನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು. ಸ್ಥಗಿತಗೊಳಿಸಿರುವ ನೋಂದಣಿ ಕೇಂದ್ರಗಳನ್ನು ಕೂಡಲೇ ಪುನರಾರಂಭಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಆತಂಕ: ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಕಳೆದ ಜ.17ರಂದು ಪಟ್ಟಣದಲ್ಲಿ ಕೊಲೆಯಾದ ಯುವಕನ ಮನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಅವರು ನರಗುಂದದಲ್ಲಿ ಈ ರೀತಿಯ ಘಟನೆಗಳು ಯಾವತ್ತೂ ನಡೆದಿರಲಿಲ್ಲ. ಇಂತಹ ಘಟನೆಗಳು ಉಡುಪಿ, ಮಂಗಳೂರು ಕಡೆಗಳಲ್ಲಿ ನಡೆಯುತ್ತಿದ್ದವು. ಆದರೆ, ಈಗ ಇಲ್ಲಿಯೂ ಭಜರಂಗದಳ, ಸಂಘ ಪರಿವಾರದವರು ಬಾಲ ಬಿಚ್ಚಿರುವುದು ಅಪಾಯಕಾರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

ಓದಿ: ದೇಶದಲ್ಲಿ ಇಂದು 73ನೇ ಗಣರಾಜ್ಯೋತ್ಸವ ಸಂಭ್ರಮ... ರಾಜಪಥ್​ನಲ್ಲಿ ಹೀಗಿರಲಿದೆ ಪಥಸಂಚಲನ

ಭಜರಂಗದಳ, ಸಂಘ ಪರಿವಾರದವರು ಕಾನೂನು ಕೈಗೆ ತೆಗೆದುಕೊಳ್ಳಲು ಶುರು ಮಾಡಿದ್ದು, ಅವರಿಗೆ ಪೊಲೀಸರ ಭಯವಿಲ್ಲದಾಗಿದೆ. ಇಂತವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳದಿದ್ದರೆ ಕುಮ್ಮಕ್ಕು ನೀಡಿದಂತಾಗುತ್ತದೆ ಎಂದು ಹೇಳಿದ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಈ ಘಟನೆಯ ಬಗ್ಗೆ ಪೊಲೀಸರಿಗೆ ಮುಂಚಿತವಾಗಿ ಗೊತ್ತಿದ್ದರೂ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಮುಂಜಾಗ್ರತೆ ಕ್ರಮ ಕೈಗೊಂಡಿದ್ದರೆ, ಹೀಗಾಗುತ್ತಿರಲಿಲ್ಲ. ಪೊಲೀಸರ ನಿರ್ಲಕ್ಷ್ಯದಿಂದ ಹೀಗಾಗಿದ್ದು, ಭಜರಂಗದಳದವರ ಜೊತೆಗೆ ಅವರೂ ಶಾಮೀಲಾಗಿರಬೇಕು. ಇಲ್ಲದಿದ್ದರೆ ಭಜರಂಗದಳವರನ್ನು ಕಂಡು ಹೆದರಿಕೊಂಡಿರಬೇಕು ಎಂದು ಸಿದ್ದರಾಮಯ್ಯ ಆರೋಪಿಸಿದರು.

ಈ ಬಗ್ಗೆ ವಿಧಾನಸಭೆಯಲ್ಲಿ ಧ್ವನಿ ಎತ್ತಲಾಗುವುದು. ಭಜರಂಗದಳ, ಸಂಘಪರಿವಾರದವರ ಮೇಲೆ ಕ್ರಮ ಕೈಗೊಳ್ಳುವಂತೆ ಮತ್ತು ಮೃತ ಯುವಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.