ಗದಗ: ಜಿಲ್ಲೆಯಲ್ಲಿ ಹಲವೆಡೆ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ರೋಣ ತಾಲೂಕಿನ ಬೆಳವಣಕಿ ಗ್ರಾಮದ ಜನತಾ ಕಾಲೋನಿ ಜಲಾವೃತಗೊಂಡಿದೆ.
ಅವೈಜ್ಞಾನಿಕ ಕಾಮಗಾರಿಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ರಾತ್ರಿಯಿಡೀ ಜನ ಜಾಗರಣೆ ಮಾಡುವಂತಾಗಿದೆ. ಜೊತೆಗೆ ರೈತರ ಜಮೀನಿನ ನೀರು ಸಹ ಕಾಲೋನಿಗೆ ನುಗ್ಗಿದೆ. ಪರಿಣಾಮ ಮನೆಯಲ್ಲಿರುವ ಹಾಸಿಗೆ, ಹೊದಿಕೆ, ಆಹಾರ ಸಾಮಗ್ರಿಗಳು ಸಂಪೂರ್ಣ ನೀರಲ್ಲಿ ಮುಳುಗಿದ್ದು ಮಕ್ಕಳು, ಮಹಿಳೆಯರು ರಾತ್ರಿಯಿಡೀ ಪರದಾಡಿದರು.
ಇದಕ್ಕೆಲ್ಲ ಜನತಾ ಕಾಲೋನಿಯ ಅವೈಜ್ಞಾನಿಕ ಕಾಮಗಾರಿಗಳೇ ಕಾರಣ ಎಂದು ಸ್ಥಳೀಯ ಆಡಳಿತದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.