ಗದಗ: ಕೋವಿಡ್-19 ರಿಂದ ಮೃತಪಟ್ಟವರ ಪ್ರಾಥಮಿಕ ಸಂಪರ್ಕ ಹೊಂದಿದವರ ಮಾಹಿತಿ ಪಡೆಯುತ್ತಿದ್ದೇವೆ. ಡಬ್ಲ್ಯೂಹೆಚ್ಒ ಹಾಗೂ ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದಲ್ಲಿ ಯಾವುದೇ ಸಮಸ್ಯೆ ಎದುರಿಸಲು ತಯಾರಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡಲಾಗುತ್ತಿದ್ದು, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ 277 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ 11 ಜನರು ಸಾವನ್ನಪ್ಪಿದ್ದಾರೆ. 75 ಜನರು ಗುಣಮುಖರಾಗಿದ್ದು, ಬೇರೆ ರಾಜ್ಯಗಳನ್ನು ಗಮನಿಸಿದರೆ. ಪಾಸಿಟಿವ್ ಪ್ರಕರಣಗಳು ಬಹಳ ಕಡಿಮೆ. ರಾಜ್ಯದಲ್ಲಿ ಖಾಸಗಿ ಕ್ಲಿನಿಕ್, ಆಸ್ಪತ್ರೆಗಳನ್ನು ತೆರೆಯಬೇಕು. ಇದರಿಂದ ಸಾರ್ವಜನಿಕರಿಗೆ ಧೈರ್ಯ ಬರುತ್ತದೆ ಎಂದು ಹೇಳಿದರು.
ಖಾಸಗಿ ವೈದ್ಯರಿಗೆ ಅಗತ್ಯವಿರುವಷ್ಟು ಪಿಪಿಇ ಕಿಟ್ ವಿತರಣೆ ಮಾಡಲಾಗುತ್ತದೆ. ದಯಮಾಡಿ ಎಲ್ಲ ಒಪಿಡಿ ತೆರೆಯಿರಿ ಎಂದರು.