ಗದಗ: ಕೊರೊನಾ ವೈರಸ್ ಹತ್ತಿಕ್ಕುವುದಕ್ಕೆ ದೇಶಾದ್ಯಂತ ಲಾಕ್ಡೌನ್ ನಂತಹ ಅನೇಕ ಕ್ರಮಗಳನ್ನ ಕೈಗೊಳ್ಳಲಾಗಿದೆ. ವೈರಸ್ ಹರಡದಂತೆ ತಡೆಯಲು ತೀವ್ರ ನಿಗಾ ವಹಿಸಲಾಗಿದೆ. ರಾಜ್ಯದ ಕೆಲವು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಜನರನ್ನು ಆತಂಕಕ್ಕೆ ದೂಡಿದೆ. ಈ ನಡುವೆ ಗದಗ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿಲ್ಲ ಅಂತ ಡಿಸಿ ಎಂ.ಜಿ ಹಿರೇಮಠ ಸ್ಪಷ್ಟನೆ ನೀಡಿದ್ದಾರೆ.
ವೈರಸ್ ಹರಡಿರುವ ಬಗೆಗಿನ ಅಂಕಿ ಅಂಶಗಳ ಮಾಹಿತಿಯನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಡುಗಡೆ ಮಾಡಿದ್ದಾರೆ. ಇದುವರೆಗೆ ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 164. ಇದರಲ್ಲಿ 28 ದಿನಗಳ ನಿಗಾ ಅವಧಿ ಪೂರೈಸಿದವರು 11ಜನ ಇದ್ರೆ ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರ ಸಂಖ್ಯೆ 141 ಜನ ಎಂದಿದ್ದಾರೆ.
ವೈದ್ಯಕೀಯ ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿರುವವರ ಸಂಖ್ಯೆ 12 ಜನ. ಇನ್ನು ಪರೀಕ್ಷೆಗಾಗಿ 37 ಮಾದರಿ ಸಂಗ್ರಹಿಸಲಾಗಿದೆ. ಇದರಲ್ಲಿ ಒಟ್ಟು 33 ಮಾದರಿಗಳು ನಕಾರಾತ್ಮಕವಾಗಿವೆ ಎಂದು ವರದಿಯಾಗಿವೆ. ಉಳಿದ 04 ಮಾದರಿ ವರದಿಗಳು ಬಾಕಿ ಇವೆ ಅಂತ ಡಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.