ಗದಗ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನೂತನ ಡಿಸಿಯಾಗಿ ಎಂ. ಸುಂದರೇಶ ಬಾಬು ಅವರನ್ನು ನೇಮಕ ಮಾಡಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ. ಹಿರೇಮಠ ಅವರು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
2012ರ ಕೇಡರನ ಐಎಎಸ್ ಅಧಿಕಾರಿ ಆಗಿರುವ ಎಂ. ಸುಂದರೇಶ ಬಾಬು ಅವರು ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಮೂಲತಃ ಸುಂದರೇಶ್ ಬಾಬು ತಮಿಳುನಾಡಿನವರು.