ETV Bharat / state

ಮೇ 27 ರಿಂದ ಗದಗ ಜಿಲ್ಲೆ ಸಂಪೂರ್ಣ ಲಾಕ್​​​ಡೌನ್: ಸಚಿವ ಸಿ ಸಿ ಪಾಟೀಲ್

ಕಠಿಣ ಲಾಕ್​​​ಡೌನ್ ಸಂದರ್ಭದಲ್ಲಿ ತರಕಾರಿ, ಹಣ್ಣು, ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು ಎಂದರಲ್ಲದೇ ಎಲ್ಲ ಬಗೆಯ ಮಾರುಕಟ್ಟೆಗಳ ಬಂದ್ ಇರಲಿವೆ‌ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಮಾಹಿತಿ ನೀಡಿದ್ದಾರೆ.

 Gadag district to be completely locked down from May 27: Minister C C Patil

author img

By

Published : May 25, 2021, 7:28 PM IST

ಗದಗ: ಜಿಲ್ಲೆಯನ್ನು ಸಂಪೂರ್ಣ ಲಾಕ್​​​ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ.

ಈ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಚಿವ ಪಾಟೀಲ್, ಮೇ27 ರ ಗುರುವಾರ ಬೆಳಗ್ಗೆ 10 ಗಂಟೆಯಿಂದ ಜೂನ್ 1 ನೇ ತಾರೀಖಿನ ಮಂಗಳವಾರ ಬೆಳಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್ ಡೌನ್ ಮಾಡಲಾಗುವುದು ಎಂದು ಸಿ ಸಿ ಪಾಟೀಲ್ ಮಾಹಿತಿ ನೀಡಿದರು.

ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದ ಸಚಿವರು, ಜನರು ಸಹಕಾರ ನೀಡಬೇಕು. ಆದಾಗ ಮಾತ್ರ ಕೊರೊನಾ ಸೋಂಕು ನಿಯಂತ್ರಣ ಮಾಡಲು ಸಾಧ್ಯ ಎಂದರು.

ಕಠಿಣ ಲಾಕ್ ಡೌನ್ ಸಂದರ್ಭದಲ್ಲಿ ತರಕಾರಿ, ಹಣ್ಣು, ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು ಎಂದರಲ್ಲದೇ ಎಲ್ಲ ಬಗೆಯ ಮಾರುಕಟ್ಟೆಗಳ ಬಂದ್ ಇರಲಿವೆ‌ ಎಂದು ಮಾಹಿತಿ ನೀಡಿದರು.

ತಳ್ಳುಗಾಡಿವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ವ್ಯಾಪಾರ ಮಾಡಬೇಕು, ಜನರೂ ಸಹ ಮಾಸ್ಕ್ ಧರಿಸಿಯೇ ಖರೀದಿ ಮಾಡಬೇಕು ಎಂದರು.

ಹಾಲು ಮಾರಾಟ ನಿತ್ಯ ಬೆಳಗ್ಗೆ 8 ಗಂಟೆಯವರೆಗೆ ಅವಕಾಶವಿದ್ದು, ಕಿರಾಣಿ ಸಾಮಾನುಗಳಿಗೆ ಹೋಂ ಡಿಲೆವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ರೈತರು ರೈತಾಪಿ ವಸ್ತುಗಳನ್ನು ಖರೀದಿ ಮಾಡಲು ಬೆಳಿಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶವಿದೆ. ನಗರ ಹಾಗೂ ಹಳ್ಳಿಗಳಲ್ಲಿಯೂ ಸಹ ಎಲ್ಲಾ ಬಗೆಯ ಹೋಟೆಲ್ ಗಳೂ ಬಂದ್ ಇರಲಿವೆ. ಹೋಟೆಲ್, ಇದ್ದರೆ ಗ್ರಾಮಾಂತರ ಪ್ರದೇಶದಲ್ಲಿ ಪಿಡಿಒ ಹಾಗೂ ತಲಾಟೆ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದ ಸಚಿವ ಪಾಟೀಲ್, ಬಾರ್ ಹಾಗೂ ವೈನ್ ಶಾಪ್ ಗೂ ಸಹ 1 ನೇ ತಾರೀಖಿನವರೆಗೂ ಬಂದ್ ಇರಲಿವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.