ಗದಗ: ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಾರಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಗರದ ಭೂಮರೆಡ್ಡಿ ವೃತ್ತದಲ್ಲಿ ನಡೆದಿದೆ.
ಗದಗ ತಾಲೂಕಿನ ನೀರಲಗಿ ಗ್ರಾಮದ ವ್ಯಕ್ತಿಗೆ ಸಂಬಂಧಿಸಿದ ಕಾರು ಇದಾಗಿದ್ದು, ನೋಡ ನೋಡುತ್ತಲೇ ಹೊತ್ತಿ ಉರಿದಿದೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ತಗುಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲವೆಂದು ಗದಗ ಸಂಚಾರಿ ಠಾಣೆ ಪಿಎಸ್ ಐ ಕಮಲಮ್ಮ ದೊಡ್ಡಮನಿ ಸ್ಪಷ್ಟಪಡಿಸಿದ್ದಾರೆ.