ಗದಗ: ನಗರದ ಹೆರಿಗೆ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಗರ್ಭಿಣಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು ಆಸ್ಪತ್ರೆಯನ್ನು ಒಂದು ದಿನದ ಮಟ್ಟಿಗೆ ಸೀಲ್‌ಡೌನ್ ಮಾಡಲಾಗಿದೆ.
ನಿನ್ನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗೊಜನೂರು ಗ್ರಾಮದ 23 ವರ್ಷದ ಗರ್ಭಿಣಿಗೆ (ಪಿ- 18282) ಕೋವಿಡ್ ಸೋಂಕು ದೃಢಪಟ್ಟಿದೆ. ಹಾಗಾಗಿ ಇಡೀ ಆಸ್ಪತ್ರೆಗೆ ಸ್ಯಾನಿಟೈಸ್ ಮಾಡಲಾಗಿದೆ. ಜೊತೆಗೆ ಮಹಿಳೆ ಸಂಪರ್ಕದಲ್ಲಿ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.
ಗರ್ಭಿಣಿ ಜೊತೆಗೆ ಚಿಕಿತ್ಸೆಗೆ ಬಂದಿದ್ದ ಬೇರೆ ಊರಿನ ಮಹಿಳೆಯರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಈಗಾಗಲೇ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮಹಿಳೆಯ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.