ಗದಗ: ಯೋಧನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನರಗುಂದ ತಾಲೂಕಿನ ಬೆಳ್ಳೇರಿ ಗ್ರಾಮದಲ್ಲಿ ನಡೆದಿದೆ.
ಮಹಾಂತೇಶ ಮೇಟಿ (25) ಮೃತ ಸೈನಿಕ. ಗ್ರಾಮದ ಹೊರವಲಯದ ಜಮೀನೊಂದರ ಮರದಲ್ಲಿ ನೇಣಿಗೆ ಶರಣಾಗಿದ್ದಾನೆ. ಕುಟುಂಬ ಸದಸ್ಯರೊಂದಿಗಿನ ವೈಮನಸ್ಸೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆಯಾದರೂ, ನಿಖರ ಮಾಹಿತಿ ತಿಳಿದುಬಂದಿಲ್ಲ.
ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.