ಗದಗ: ಗದಗನಲ್ಲಿ ಕೊರೊನಾ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಜನ ಮಾರುಕಟ್ಟೆಯಲ್ಲಿ ದಿನಸಿ, ತರಕಾರಿ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ.
ನಗರದ ತರಕಾರಿ ಮಾರ್ಕೆಟ್ನಲ್ಲಿ ಬೆಳ್ಳಂಬೆಳಗ್ಗೆ ಜನಜಂಗುಳಿ ಕಂಡುಬಂದಿದೆ. ಹೂವು, ಹಣ್ಣು, ತರಕಾರಿಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊರೊನಾ ಹೆಚ್ಚಳಕ್ಕೆ ಮತ್ತಷ್ಟು ಪುಷ್ಟಿ ನೀಡ್ತಿದ್ದಾರೆ. ವ್ಯಾಪಾರಸ್ಥರು ಸಹ ಮಾಸ್ಕ್ ಹಾಕಿಕೊಳ್ಳದೇ ಬೇಜವಾಬ್ದಾರಿ ಪ್ರದರ್ಶಿಸುತ್ತಿದ್ದಾರೆ.
ಇನ್ನೊಂದೆಡೆ ರಸ್ತೆಯ ಮೇಲೆ ವಾಹನಗಳನ್ನ ತಡೆದು ಮಾಸ್ಕ್ ಹಾಕದವರಿಗೆ ದಂಡ ಹಾಕುವ ಪೊಲೀಸರು ಮಾತ್ರ ಮಾರ್ಕೆಟ್ನಲ್ಲಿನ ಜನಜಂಗುಳಿ ನಿಯಂತ್ರಣ ಮಾಡುವಲ್ಲಿ ಮಾತ್ರ ಕಂಡುಬಂದಿಲ್ಲ. ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ, ನಗರಸಭೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಈ ಅಸಡ್ಡೆಗೆ ಕಾರಣ ಎಂಬ ಮಾತು ಕೇಳಿಬರುತ್ತಿದೆ.