ಗದಗ: ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ ಪವಾರ ಹಾಗೂ ಅಸ್ಲಂ ಡಾಲಾಯತ್ ಬಂಧಿತ ಆರೋಪಿಗಳು. ಆರೋಪಿಗಳಿಂದ 1 ಲಕ್ಷ 10 ಸಾವಿರ ರೂಪಾಯಿ ಮೌಲ್ಯದ ಎರಡು ಟಿವಿ, ಒಂದು ಬೈಕ್ ಹಾಗೂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಇತ್ತೀಚಿಗೆ ಆರ್.ಕೆ.ನಗರ ಹಾಗೂ ಸಾರಿಗೆ ನಗರದಲ್ಲಿ ಮನೆ ಕಳ್ಳತನ ಮಾಡಿ, ತಲೆಮರೆಸಿಕೊಂಡು ಓಡಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಗದಗ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.