ETV Bharat / state

ಬಂದ್ ವೇಳೆ ಶಾಂತಿ ಭಂಗ ಮಾಡಿದರೆ ಕಠಿಣ ಕ್ರಮ: ಗದಗ ಎಸ್ಪಿ ಎಚ್ಚರಿಕೆ - ಎಸ್ಪಿ ಯತೀಶ್ ಎನ್ ಸುದ್ದಿ ಗೋಷ್ಠಿ ಸುದ್ದಿ

ಬಂದ್​ಗೆ ಸಂಬಂಧಿಸಿದಂತೆ ಪ್ರತಿಭಟನೆಗೆ ಮುಂದಾಗಿರುವ ಸಂಘಟನೆಗಳ ಮುಖಂಡರ ಸಭೆ ನಡೆಸಲಾಗಿದೆ. ಸಂಘಟಕರಿಗೆ ಸುಪ್ರೀಂಕೋರ್ಟ್ ಗೈಡ್​​ಲೈನ್ಸ್ ಮಾಹಿತಿ ಜೊತೆಗೆ ಕಾನೂನು ಪಾಲನೆ ಮಾಡುವಂತೆ ತಿಳಿವಳಿಕೆ ನೀಡಲಾಗಿದೆ ಎಂದರು.

Gadag SP Yatish N response to Karnataka bandh
ಎಸ್ಪಿ ಯತೀಶ್ ಎನ್ ಎಚ್ಚರಿಕೆ
author img

By

Published : Sep 28, 2020, 8:13 AM IST

ಗದಗ: ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದ್ದು, ಬಂದ್ ವೇಳೆ ಶಾಂತಿ ಭಂಗ ಮಾಡಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂದ್​ಗೆ ಸಂಬಂಧಿಸಿದಂತೆ ಪ್ರತಿಭಟನೆಗೆ ಮುಂದಾಗಿರುವ ಸಂಘಟನೆಗಳ ಮುಖಂಡರ ಸಭೆ ನಡೆಸಲಾಗಿದೆ. ಸಂಘಟಕರಿಗೆ ಸುಪ್ರೀಂಕೋರ್ಟ್ ಗೈಡ್​​ಲೈನ್ಸ್ ಮಾಹಿತಿ ಜೊತೆಗೆ ಕಾನೂನು ಪಾಲನೆ ಮಾಡುವಂತೆ ತಿಳಿವಳಿಕೆ ನೀಡಲಾಗಿದೆ ಎಂದು ತಿಳಿಸಿದರು.

ಎಸ್ಪಿ ಯತೀಶ್ ಎನ್.

ಬಂದ್ ವೇಳೆ ದೈನಂದಿನ ಕೆಲಸದಲ್ಲಿ ನಿರತರಾದವರಿಗೆ ಬಲವಂತವಾಗಿ ಬಂದ್ ಮಾಡುವಂತೆ ಒತ್ತಾಯಿಸಬಾರದು. ಒಂದು ವೇಳೆ ಬಲವಂತ ಮಾಡುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಂದ್ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಹೆಚ್ಚುವರಿಯಾಗಿ ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.