ಗದಗ: ಕ್ವಾರಂಟೈನ್ನಲ್ಲಿದ್ದವರು ಬೀದಿಯಲ್ಲಿ ತಿರುಗುತ್ತಿರುವುದನ್ನು ಕಂಡ ತಹಶೀಲ್ದಾರ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
14 ದಿನಗಳ ಕಾಲ ಹೋಮ್ ಕ್ವಾರಂಟೈನ್ನಲ್ಲಿ ಇರಬೇಕಾಗಿದ್ದವರು ನಿಯಮ ಉಲ್ಲಂಘಿಸಿ ಮನೆ ಬಿಟ್ಟು ತಿರುಗುತ್ತಿದ್ದವರನ್ನು ಪತ್ತೆ ಹಚ್ಚಿದ ತಹಶೀಲ್ದಾರ್ ಹಾಗೂ ಸಿಬ್ಬಂದಿ ವರ್ಗ, ಅವರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿದ್ದಾರೆ.
ಗದಗ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಹಾಗೂ ಸಿಬ್ಬಂದಿ ವರ್ಗ ಕೋಟುಮಚಗಿ, ಅಡವಿ ಸೋಮಾಪುರ ತಾಂಡಾ ಹಾಗೂ ನಾಗಾವಿ ತಾಂಡಾದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ವಿನಾ ಕಾರಣ ಮನೆ ಬಿಟ್ಟು ಓಡಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಕರೆ ತಂದು ಬೆಟಗೇರಿಯ ಕ್ವಾರಂಟೈನ್ ಕೇಂದ್ರವೊಂದರಲ್ಲಿ ಇರಿಸಿದ್ದಾರೆ.
ಬೇರೆ ಪ್ರದೇಶದಿಂದ ಬಂದವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ನಲ್ಲಿ ಇರಬೇಕಾಗಿದ್ದು ನಿಯಮ. ಆದರೆ ಈ ಮೂವರು ನಿಯಮ ಉಲ್ಲಂಘಿಸಿ ಗ್ರಾಮದಲ್ಲಿ ಸುತ್ತಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ತಹಶೀಲ್ದಾರ್ ಹಾಗೂ ಸಿಬ್ಬಂದಿ ವರ್ಗ ಕಾರ್ಯಾಚರಣೆ ನಡೆಸಿ ಕ್ವಾರಂಟೈನ್ ಕೇಂದ್ರಕ್ಕೆ ಬಿಟ್ಟು ಬಂದಿದ್ದಾರೆ.