ಗದಗ: ಜಿಲ್ಲೆಯಲ್ಲಿ ಇಂದು ಮತ್ತೆ 100 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1668ಕ್ಕೆ ಏರಿಕೆಯಾಗಿದೆ. ಕೊರೊನಾಗೆ ಇಂದು ಇಬ್ಬರು ಮೃತಪಟ್ಟಿದ್ದು. ಬಲಿಯಾದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ಇಂದು 40 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜೊತೆಗೆ ಈವರೆಗೆ 578 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1051ಕ್ಕೆ ಏರಿಕೆಯಾಗಿದ್ದು, ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.