ಗದಗ: ಗ್ರಾಮದ ಆಶ್ರಮ ಶಾಲೆಯನ್ನು ಕ್ವಾರಂಟೈನ್ ಕೇಂದ್ರ ಮಾಡೋದಕ್ಕೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯು ಆಶ್ರಮ ಶಾಲೆಯನ್ನು ಕ್ವಾರಂಟೈನ್ ಮಾಡಲು ಮುಂದಾಗಿದ್ದು ಗ್ರಾಮಸ್ಥರು, ಶಾಲೆಯ ಗೇಟ್ಗೆ ಮುಳ್ಳುಗಳನ್ನಿಟ್ಟು ವಿರೋಧ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಪಿ. ಬಳಿಗಾರ್ ನೇತೃತ್ವದಲ್ಲಿ ವಿರೋಧ ವ್ಯಕ್ತಪಡಿದ ಗ್ರಾಮಸ್ಥರು, ಏನೇ ಆಗಲಿ ಕ್ವಾರಂಟೈನ್ ಕೇಂದ್ರ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.