ಗದಗ: ಜಿಲ್ಲಾಡಳಿತದ ಭವನದಲ್ಲಿಂದು ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡರ ನೇತೃತ್ವದಲ್ಲಿ ಸಾಮಾನ್ಯಸಭೆ ನಡೆಯುತ್ತಿತ್ತು. ಈ ಸಭೆಯಲ್ಲಿ ಅಧಿಕಾರಿಗಳು ನಿದ್ದೆ ಹಾಗೂ ಮೊಬೈಲ್ನಲ್ಲಿ ಬ್ಯೂಸಿಯಾಗಿದ್ದರು.
ಆರೋಗ್ಯ, ಶಿಕ್ಷಣ ಇಲಾಖೆಗಳ ಪ್ರಗತಿಯ ಕುರಿತು ಗಂಭೀರ ಚರ್ಚೆಗಳು ಸಭೆಯಲ್ಲಿ ನಡೆಯುತ್ತಿದ್ದವು. ಆದರೆ, ಈ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ, ಬಹುತೇಕ ಇನ್ನುಳಿದ ಇಲಾಖೆಯ ಅಧಿಕಾರಿಗಳು ಸಭೆಗೂ ನಮಗೂ ಸಂಬಂಧವಿಲ್ಲ ಎಂಬಂತೆ ಮೊಬೈಲ್ನಲ್ಲಿ ತಲ್ಲೀನರಾಗಿದ್ದರು. ಅವರೊಂದಿಗೆ ಕೆಲ ಜಿಲ್ಲಾ ಪಂಚಾಯಿತಿ ಸದಸ್ಯರೂ ಸಹಿತ ಮೊಬೈಲ್ನಲ್ಲಿ ಮಗ್ನರಾಗಿದ್ದರು.
ಓದಿ: ಪಾಲಿಕೆ ಚುನಾವಣೆ ಮುನ್ನವೇ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ
ಜಿಲ್ಲೆಯಲ್ಲಿರುವ ಸಮಸ್ಯೆಗಳ ಕುರಿತು ಚರ್ಚಿಸಬೇಕಾಗಿದ್ದ, ಎಸಿ ಹಾಲ್ನಲ್ಲಿ ಕೂತಿದ್ದ ಅಧಿಕಾರಿ ಮಹೋದಯರು ನಿದ್ದೆಗೆ ಜಾರುವ ಮೂಲಕ ಬೇಜವಾಬ್ದಾರಿತನದಿಂದ ವರ್ತಿಸಿದರು. ಜನರ ಸಮಸ್ಯೆ ಬಗೆಹರಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳು ಹೀಗೆ ಮೊಬೈಲ್ ನೋಡುತ್ತಾ, ನಿದ್ದೆ ಮಾಡುತ್ತಾ ಇದ್ದರೆ, ಜನರ ಸಮಸ್ಯೆ ಹೇಗೆ ಬಗೆಹರಿಸುತ್ತಾರೆ ಎಂದು ಜನಸಾಮಾನ್ಯರು ಪ್ರಶ್ನೆ ಮಾಡುತ್ತಿದ್ದಾರೆ.