ಗದಗ : ನಿಗದಿತ ಸಮಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಂಚಮಸಾಲಿ ಮಹಿಳಾ ಘಟಕದಿಂದ ಮತದಾನ ಬಹಿಷ್ಕಾರ ಮಾಡಲಿದ್ದೇವೆ. ಮೀಸಲಾತಿ ನೀಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಪಂಚಮಸಾಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ್ ಹೇಳಿದ್ದಾರೆ.
ಇಲ್ಲಿ ಮಾತನಾಡಿದ ಅವರು, ಆಗಸ್ಟ್ 22 ಸರ್ಕಾರಕ್ಕೆ ಅಂತಿಮ ಗಡುವು ನೀಡಲಾಗಿದೆ. ಈ ಗಡುವಿನ ಒಳಗೆ ಸರ್ಕಾರ ತನ್ನ ನಿರ್ಧಾರವನ್ನು ತಿಳಿಸಬೇಕು. ಸರ್ಕಾರ ಕಣ್ಣೋರೆಸುವ ತಂತ್ರ ಮಾಡಬಾರದು. ಇನ್ನು ಗಡುವು ನೀಡುವ ವಿಚಾರವಿಲ್ಲ. ಮಹಿಳಾ ಘಟಕದಿಂದ ಮುಂದಿನ ಹೋರಾಟ ಮತ್ತಷ್ಟು ಉಗ್ರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು.
ಉಡಿ ತುಂಬುವ ಕಾರ್ಯಕ್ರಮ : ಶ್ರಾವಣ ಮಾಸದಿಂದ ಪಂಚಮಸಾಲಿ ಸಮುದಾಯದ ಮಹಿಳೆಯರನ್ನು ಸಂಘಟಿಸುವ ನಿಟ್ಟಿನಲ್ಲಿ ಉಡಿ ತುಂಬುವ ಕಾರ್ಯಕ್ರಮ ಮಾಡಲಿದ್ದೇವೆ. ಈ ಕಾರ್ಯಕ್ರಮದಲ್ಲಿ 32 ಜಿಲ್ಲೆಯಲ್ಲಿ ಸಂಚರಿಸಿ ಸಂಘಟನೆ ಮಾಡಲಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ: ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ : ಪ್ರತಿಭಟನೆ ವಾಪಸ್