ಗದಗ : ಶಾರ್ಟ್ ಸರ್ಕ್ಯೂಟ್ನಿಂದಾಗಿ ಜನರಲ್ ಸ್ಟೋರ್ ಹೊತ್ತಿ ಉರಿದ ಘಟನೆ ನಗರದಲ್ಲಿ ನಡೆದಿದೆ. ಕೆಸಿ ರಾಣಿ ರಸ್ತೆಯಲ್ಲಿರುವ ಚೇತನ ಕ್ಯಾಂಟೀನ್ ಸರ್ಕಲ್ ಬಳಿ ಈ ಘಟನೆ ನಡೆದಿದೆ.
ಬಸವರಾಜ್ ನಾಡಗೌಡರ ಎಂಬುವರಿಗೆ ಸೇರಿದ್ದ ಜನರಲ್ ಸ್ಟೋರ್ ಬೆಂಕಿಗೆ ಆಹುತಿಯಾಗಿದೆ. ಘಟನೆಯಲ್ಲಿ ಜನರಲ್ ಸ್ಟೋರ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ. ಅಲ್ಲದೆ ಘಟನೆಯಲ್ಲಿ ಅಕ್ಕಪಕ್ಕದ ಮಳಿಗೆಗಳಿಗೂ ಹಾನಿಯಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮದ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬೆಟಗೇರಿ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ-ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.