ಗದಗ: ಗೋವಾ ಸರ್ಕಾರ ಮತ್ತೆ ಮಹದಾಯಿ ವಿಚಾರವಾಗಿ ಖ್ಯಾತೆ ತೆಗೆದ ಪರಿಣಾಮ ಗದಗನಲ್ಲಿ ಮಹದಾಯಿ ಹೋರಾಟಗಾರರ ಆಕ್ರೋಶದ ಕಟ್ಟೆ ಒಡೆದಿದೆ. ಮಹದಾಯಿ ವಿಚಾರವಾಗಿ ರಾಜ್ಯ ಸರ್ಕಾರದ ಮೇಲೆ ನ್ಯಾಯ್ಯಾಂಗ ನಿಂದನೆ ಆರೋಪಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರ ಪರಿಣಾಮ ಗದಗನಲ್ಲಿ ಮಹದಾಯಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋವಾ ಸಿಎಂ ರಿಂದ ನ್ಯಾಯಾಂಗ ನಿಂದನೆ ಸಲ್ಲಿಸಿದ್ದು ಹಾಸ್ಯಾಸ್ಪದವಾಗಿದೆ ಅಂತ ಹೋರಾಟಗಾರ ಚಂದ್ರು ಚವ್ಹಾನ್ ವ್ಯಂಗ್ಯವಾಡಿದ್ದಾರೆ. ಕುಡಿಯುವ ನೀರಿಗೆ ಯಾರ ಅನುಮತಿಯೂ ಬೇಕಿಲ್ಲಾ. ಇದೂ ಸಮಸ್ಯೆಯನ್ನು ಜೀವಂತ ಇಡಬೇಕೆನ್ನುವುದು ಬಿಜೆಪಿ ಭಾವಿಸಿದೆ ಅಂತ ಆರೋಪಿಸಿದ್ದಾರೆ. ಮೂರು ಕಡೆ ಬಿಜೆಪಿ ಸರ್ಕಾರವೇ ಆಡಳಿತದಲ್ಲಿದೆ. ಕರ್ನಾಟಕ, ಗೋವಾ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಮತ್ತೆ ಅದೇ ರಾಜಕೀಯ ಮುಂದುವರೆದಿದೆ. ಮೂರು ಕಡೆ ಒಂದೇ ಪಕ್ಷದಲ್ಲಿ ಅಧಿಕಾರವಿದ್ದಾಗಲೂ ಮತ್ತೆ ಮಹದಾಯಿಗೆ ತಕರಾರು ತೆಗೆದಿದ್ದಾರೆ. ಅರ್ಜಿ ವಿಚಾರಣೆ ಹಂತದಲ್ಲಿ ಇದ್ದಾಗ ನೀರು ತಿರುಗಿಸಿ ನ್ಯಾಯಾಂಗ ನಿಂದನೆಯ ಆರೋಪ ಮಾಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ನಡೆ ರಾಜಕೀಯ ಅಂತ ಸ್ಪಷ್ಟವಾಗುತ್ತೆ ಅಂತ ಆರೋಪಿಸಿದ್ದಾರೆ.
ಇನ್ನು ಈಗಾಗಲೇ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಹಂಚಿಕೆ ಮಾಡಿ ಸುಪ್ರೀಂಕೋರ್ಟ್ ಐತೀರ್ಪು ನೀಡಿತ್ತು. ಇದರ ಆದಿ ಸೂಚನೆ ಹೊರಡಿಸಲು 2020 ರ ಫೆಬ್ರವರಿ 2 ರಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಫೆ. 27 ಕ್ಕೆ ಕೇಂದ್ರ ಸರ್ಕಾರ ಗೆಜೆಟ್ ಆಧಿಸೂಚನೆ ಹೊರಡಿಸಿ ನೀರು ಬಳಕೆಗೆ ಸಮ್ಮತಿ ನೀಡಿತ್ತು. ಹೀಗಾಗಿ ಮಹದಾಯಿ ನದಿ ತಿರುವು ಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿತ್ತು. ಇದೀಗ ಮತ್ತೆ ಕ್ಯಾತೆ ತೆಗೆದು ಸುಪ್ರೀಂ ಮೇಟ್ಟಿಲೇರಿದ ಗೋವಾ ಸರ್ಕಾರದ ವಿರುದ್ಧ ಹೋರಾಟಗಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು. ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು. ಒಂದು ವೇಳೆ ಇದೇ ರೀತಿ ರಾಜಕೀಯ ಮುನ್ನೆಲೆಗೆ ಬಂದರೆ ಮತ್ತೆ ಕ್ರಾಂತಿ ಮಾಡಬೇಕಾಗ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇನ್ನು ಕಳಸಾ ಯೋಜನೆ ಇನ್ನೇನು ಬಗೆಹರಿಯಿತು. ಉತ್ತರ ಕರ್ನಾಟಕದ ಜನರ ನೀರಿನ ದಾಹ ನೀಗಿತು ಅಂತ ಅಂದುಕೊಂಡಿದ್ದರು. ಮಲಪ್ರಭಾ ನದಿ ನಿರಂತರವಾಗಿ ತುಂಬಿ ಹರಿದು ಈ ಭಾಗದಲ್ಲಿ ಸದಾ ಹಸಿರು ನರ್ತನ ಮಾಡುತ್ತೆ ಅಂದುಕೊಂಡವರಿಗೆ ಈಗ ಗೋವಾ ಶಾಕ್ ಕೊಟ್ಟಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಮಧ್ಯೆ ಪ್ರವೇಶಿಸಿ ಈ ಭಾಗದ ಜನರಿಗೆ ನ್ಯಾಯ ಒದಗಿಸಬೇಕು ಅನ್ನೋದು ರೈತರ ಒತ್ತಾಯವಾಗಿದೆ.