ಗದಗ : ಕೊರೊನಾ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಗುಳೆ ಹೋದ ಕಾರ್ಮಿಕರನ್ನು ವಾಪಸ್ ಕರೆಸುವಂತೆ ಶಾಸಕ ಹೆಚ್ ಕೆ ಪಾಟೀಲ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಆಗಿ ಸಾಕಷ್ಟು ಕಾರ್ಮಿಕರು ಪರದಾಡ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಿಗೆ ಗುಳೆ ಹೋದ ಜನರು ಊರಿಗೆ ಮರಳೋಕಾಗದೆ ಸಂಕಷ್ಟಕ್ಕೀಡಾಗಿದ್ದಾರೆ. ಗದಗನ ನೂರಾರು ಕೂಲಿ ಕಾರ್ಮಿಕರು ಗೋವಾ, ಕೇರಳ, ಮಹಾರಾಷ್ಟ್ರಗಳಲ್ಲಿ ಊರಿಗೆ ಮರಳೋಕೂ ಆಗದೆ ಅಲ್ಲಿಯೇ ನರಕಯಾತನೆ ಅನುಭವಿಸ್ತಿದ್ದಾರೆ. ಹೀಗಾಗಿ ಶಾಸಕ ಹೆಚ್ ಕೆ ಪಾಟೀಲ್ ಸಿಎಂಗೆ ಪತ್ರ ಬರೆದು ಅವರನ್ನೆಲ್ಲಾ ವಾಪಸ್ ಕರೆ ತರುವ ವ್ಯವಸ್ಥೆ ಮಾಡಬೇಕು ಅಂತಾ ಮನವಿ ಮಾಡಿಕೊಂಡಿದ್ದಾರೆ.
ಸುಮಾರು 8 ರಿಂದ 10 ಸಾವಿರ ಜನರು ಗೋವಾ, ಮಹಾರಾಷ್ಟ್ರ, ಕೇರಳ ರಾಜ್ಯಗಳಿಗೆ ದುಡಿಯಲು ಹೋಗಿದ್ದಾರೆ. ಅವರನ್ನು ಕರೆತರಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಬೇಕು. ಕೆಲಸ ಇಲ್ಲದೆ ಅಗತ್ಯ ಆಹಾರ ಸಿಗದೆ ಗದಗ ಜಿಲ್ಲೆಯ ಕೂಲಿ ಕಾರ್ಮಿಕರು ಪರದಾಡುವಂತಾಗಿದೆ. ಹೀಗಾಗಿ ಅವರನ್ನು ವಾಪಸ್ ಕರೆತರುವ ವ್ಯವಸ್ಥೆ ಮಾಡಬೇಕು ಅಂತಾ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.