ಗದಗ: ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವ ಕ್ರಮ ಒಂದು ಷಡ್ಯಂತ್ರ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪಾಟೀಲ್, ತನಿಖಾ ಸಂಸ್ಥೆಗಳನ್ನು ಬಳಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಸರಿಯಾದ ನಡೆ ಅಲ್ಲ ಎಂದಿದ್ದಾರೆ.
ಸಿಬಿಐ ವಶಕ್ಕೆ ವಿನಯ್ ಕುಲಕರ್ಣಿ: ಹಿಂಡಲಗಾ ಜೈಲಿನಿಂದ ರಹಸ್ಯ ಸ್ಥಳಕ್ಕೆ ಕರೆದೊಯ್ದ ಅಧಿಕಾರಿಗಳು
ಸಿಬಿಐ, ಇಡಿ ಸಂಸ್ಥೆಗಳನ್ನು ಬಿಜೆಪಿ ತನ್ನ ಕೈಗೊಂಬೆಯನ್ನಾಗಿಸಿ ಕಾಂಗ್ರೆಸ್ ನಾಯಕರನ್ನು ಬೆದರಿಸುವ ತಂತ್ರ ರೂಪಿಸುತ್ತಿದೆ. ಇದು ಪ್ರಜಾಪ್ರಭುತ್ವದ ವಿರೋಧಿ ಕ್ರಮವಾಗಿದ್ದು, ಖಂಡನೀಯವಾದದ್ದು ಎಂದು ಹೆಚ್ ಕೆ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.