ETV Bharat / state

ಗದಗದಲ್ಲಿ ಹದಗೆಟ್ಟ ರಸ್ತೆ‌ ರಿಪೇರಿ ಮಾಡಿಸಿ.. ಜಿಲ್ಲಾಡಳಿತಕ್ಕೆ ಪತ್ರ ಬರೆದ ಶಾಸಕ ಹೆಚ್ ಕೆ ಪಾಟೀಲ್ - ಬೆಟಗೇರಿ ಅವಳಿ ನಗರದ ರಸ್ತೆಗಳು

ಬೆಟಗೇರಿ ಅವಳಿ ನಗರದ ರಸ್ತೆಗಳು ಹದಗೆಟ್ಟಿದ್ದು ಕೆಲವೆಡೆ ಸಂಚಾರವೇ ದುಸ್ತರವಾಗಿದೆ. ಹೀಗಾಗಿ, ಯುದ್ಧೋಪಾದಿಯಲ್ಲಿ ರಸ್ತೆಗಳನ್ನು ದುರಸ್ತಿಗೊಳಿಸಿ ವಾಹನ ಮತ್ತು ಜನರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಶಾಸಕ ಹೆಚ್ ಕೆ ಪಾಟೀಲ್​ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ.

hk patil
ಜಿಲ್ಲಾಡಳಿತಕ್ಕೆ ಪತ್ರ ಬರೆದ ಶಾಸಕ ಹೆಚ್ ಕೆ ಪಾಟೀಲ್
author img

By

Published : Oct 3, 2022, 7:51 AM IST

ಗದಗ: ಗದಗ ಬೆಟಗೇರಿ ಅವಳಿ ನಗರದಲ್ಲಿ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗಿದೆ. ಶೀಘ್ರವಾಗಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಗದಗ ಮತಕ್ಷೇತ್ರದ ಶಾಸಕ ಹೆಚ್ ಕೆ ಪಾಟೀಲ್​ ಮನವಿ ಮಾಡಿದ್ದಾರೆ.

ಈ ಕುರಿತು ಜಿಲ್ಲಾಡಳಿತಕ್ಕೆ ಪತ್ರ ಬರೆದಿರುವ ಶಾಸಕರು, ಹದಗೆಟ್ಟಿರುವ ರಸ್ತೆಗಳಿಂದಾಗಿ ಸಾರ್ವಜನಿಕರು ಎಲ್ಲಿ, ಯಾವ ರೀತಿ ಅಪಘಾತಗಳಾಗುತ್ತವೆಯೋ ಎಂಬ ಭಯದಿಂದಲೇ ಸಂಚರಿಸುವಂತಾಗಿದೆ. ಕೆಲವೆಡೆ ಸಂಚಾರವೇ ದುಸ್ತರವಾಗಿದೆ. ಹೀಗಾಗಿ, ಯುದ್ಧೋಪಾದಿಯಲ್ಲಿ ಅವಳಿ ನಗರದ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಿ ವಾಹನ ಮತ್ತು ಜನರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ವಿನಂತಿಸಿದ್ದಾರೆ.

ಬೆಟಗೇರಿ ಅವಳಿ ನಗರದಲ್ಲಿ ಹದಗೆಟ್ಟ ರಸ್ತೆ‌

ಇದನ್ನೂ ಓದಿ: ತುಮಕೂರಿನಲ್ಲಿ ದಿಢೀರ್ ಕುಸಿದ ರಸ್ತೆಯಲ್ಲಿ ಬೃಹತ್ ಕಂದಕ ಸೃಷ್ಠಿ

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ್, ಶಾಸಕರಿಗೆ ಇತ್ತೀಚೆಗೆ ನಗರದ ಮೇಲೆ ಬಹಳಷ್ಟು ಪ್ರೀತಿ ಬಂದುಬಿಟ್ಟಿದೆ. ನಗರದ ರಸ್ತೆ ದುರಸ್ತಿಗೆ ಸಚಿವರು 9 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ. ಮಳೆಗಾಲ ಮುಗಿದ ಬಳಿಕ ಕಾಮಗಾರಿ ಆರಂಭಿಸಲಾಗುತ್ತದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.