ಗದಗ: ನಿರಂತರ ಮಳೆಗೆ ಮನೆ ಗೋಡೆ ಕುಸಿದು ಮಣ್ಣಿನಡಿ ಸಿಲುಕಿ ವೃದ್ಧೆ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ನಡೆದಿದೆ.
63 ವರ್ಷದ ಶಂಕ್ರಮ್ಮ ಭೀಮನಗೌಡ್ರ ಬೆಳಗಿನ ಜಾವ ಬಹಿರ್ದೆಸೆಗೆ ಹೋಗಿ ಬರುವ ವೇಳೆ ಎದುರು ಮನೆ ಕುಸಿದಿದೆ. ಇನ್ನೇನು ಮನೆ ಒಳಗೆ ಹೋಗಬೇಕು ಅನ್ನುವಷ್ಟರಲ್ಲಿ ವೃದ್ಧೆ ಮೇಲೆ ಎದುರು ಇರುವ ಮಣ್ಣಿನ ಮನೆ ಕುಸಿದುಬಿದ್ದಿದೆ.
ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಿಲ್ಲ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.