ETV Bharat / state

ಅಕ್ರಮವಾಗಿ ಮದ್ಯ ಮಾರಾಟ: ಆರೋಪಿಗಳು ಅಬಕಾರಿ ಅಧಿಕಾರಿಗಳ ವಶಕ್ಕೆ - Public Attack news

ಗ್ರಾಮದಲ್ಲಿ ಕದ್ದು ಮುಚ್ಚಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರ ಮನೆ ಮೇಲೆ ದಾಳಿ ಮಾಡಿದ ಸ್ಥಳೀಯರು, ಅಲ್ಲಿದ್ದ ಮದ್ಯವನ್ನು ವಶಪಡಿಸಿಕೊಂಡು ರಸ್ತೆಗೆ ಸುರಿದು ಆಕ್ರೋಶ ಹೊರ ಹಾಕಿದ್ದಾರೆ.

Illegal liquor sales
ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳು
author img

By

Published : May 9, 2020, 5:59 PM IST

ಗದಗ: ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಹಿಳೆಯೊಬ್ಬರ ಮನೆ ಮೇಲೆ ಗ್ರಾಮಸ್ಥರು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಯತ್ನಳ್ಳಿ ಗ್ರಾಮದಲ್ಲಿ ನಡೆದಿದೆ.

ದಾಳಿ ಬಳಿಕ ಅಕ್ರಮ ಮದ್ಯವನ್ನು ವಶಪಡಿಸಿಕೊಂಡ ಗ್ರಾಮಸ್ಥರು, ಅದನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆ ಹಾಗೂ ಆಕೆಯ ಗಂಡನನ್ನು ಗ್ರಾಮಸ್ಥರು ಕೂಡಿ ಹಾಕಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿಗಳು ಪರಿಸ್ಥಿತಿಯನ್ನು ತಿಳಿಗೊಳಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳು

ಅಕ್ರಮ ಮದ್ಯ ಮಾರಾಟ ಮಾಡದಂತೆ ಈ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು. ಆದರೂ ಸಹ ಕೇಳಿರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ಹೀಗೆ ಮಾಡಬೇಕಾಯ್ತು ಎಂದು ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.