ಗದಗ: ತಾಲೂಕು ಕೇಂದ್ರಗಳು ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಅಂಗಡಿ ಮುಗ್ಗಟ್ಟುಗಳೂ ಸೇರಿದಂತೆ ಎಲ್ಲಡೆ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಕರವೇ ಶಿವರಾಮೇಗೌಡ ಬಣದ ಗದಗ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲೂಕು ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ನವಂಬರ್ 1ರವರೆಗೂ ಸಮಯ ನೀಡಲಾಗಿದೆ. ಒಂದು ವೇಳೆ, ಈ ನಿಯಮ ಜಾರಿಯಾಗದಿದ್ದಲ್ಲಿ ನವಂಬರ್ 1 ರಂದು ನಾಮಫಲಕಗಳಿಗೆ ಮಸಿ ಬಳಿದು ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.