ಗದಗ: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ನಾರಾಯಣಗೌಡ ಬಣದ ಕರೆವೇ ಕಾರ್ಯಕರ್ತರು ಗದಗ್ನಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮಾಡಿದರು. ನಗರದ ಮುಳಗುಂದ ನಾಕಾದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದರು.
ಈ ವೇಳೆ ಎತ್ತಿನ ಗಾಡಿಯಲ್ಲಿ ಬೈಕ್ ಇಟ್ಟುಕೊಂಡು ಹಾಗೂ ಬೈಕ್ಗೆ ಹಗ್ಗಕಟ್ಟಿ ಎಳೆದುಕೊಂಡು ಬರುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದರು.
ಈ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೊರೊನಾ ಸಂದರ್ಭದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯಿಂದ ಜನ ಸಾಮಾನ್ಯರಿಗೆ ಹೊರೆಯಾಗಿದೆ. ಕೂಡಲೆ ದರ ಇಳಿಸದೇ ಹೋದರೆ ಮುಂದಿನ ದಿನಮಾನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಪ್ರತಿಭಟನಾಕಾರರು ಪಾದಯಾತ್ರೆ ಮೂಲಕ ಱಲಿ ನಡೆಸಿ ನಂತರ ಜಿಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.