ಗದಗ: ಕಾಗಿನೆಲೆ ಪೀಠದ ಈಶ್ವರಾನಂದ ಸ್ವಾಮೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಹಾಲುಮತ ಮಹಾಸಭಾ ಹಾಗೂ ಜಿಲ್ಲಾ ಕುರುಬ ಸಮಾಜದ ಸದಸ್ಯರು ಜಿಲ್ಲಾಡಳಿತದ ಮುಂಭಾಗ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾನಿರತರು, ಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕ್ಷಮೆಯಾಚಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.