ETV Bharat / state

ಗದಗ: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಮಹಿಳಾ ಅಧಿಕಾರಿ - ಗದಗದಲ್ಲಿ ಎಸಿಬಿ ದಾಳಿ

ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಗದಗ ಕಾರ್ಮಿಕ ಇಲಾಖೆಯ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

lady officer detained by ACB while receiving bribe
ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಮಹಿಳಾ ಅಧಿಕಾರಿ
author img

By

Published : Feb 24, 2021, 8:39 PM IST

ಗದಗ: ಲಂಚ ಪಡೆಯುತ್ತಿದ್ದ ಕಾರ್ಮಿಕ‌ ಇಲಾಖೆಯ ಮಹಿಳಾ ಅಧಿಕಾರಿ ಅನುರಾಧ ಎಂಬುವರು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕಾರ್ಮಿಕ ಇಲಾಖೆಯಿಂದ ಸ್ವ-ಉದ್ಯೋಗ ಮಷಿನ್ ಅಳವಡಿಸಲು ಪರವಾನಗಿ ನೀಡುವಂತ ಫಲಾನುಭವಿ ಮೆಹಬೂಬ್ ಸಾಬ್ ಕನಕೆನವರ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಆದರೆ ಪರಾವಾನಗಿ ನೀಡದೆ ಸತಾಯಿಸುತ್ತಿದ್ದ ಅಧಿಕಾರಿ ಅನುರಾಧ, 2,500 ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರಂತೆ. ಈ ಬಗ್ಗೆ ಮೆಹಬೂಬ್​ ಸಾಬ್ ಎಸಿಬಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಎಸಿಬಿ ಅಧಿಕಾರಿಗಳು, ಮೆಹಬೂಬ್​ ಸಾಬ್​ರಿಂದ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿ ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ.

ಓದಿ : ಶೋ ರೂಂಗೆ ನುಗ್ಗಿ 32 ಲಕ್ಷ ರೂ. ಮೌಲ್ಯದ ಎರಡು ಕಾರು ಕದ್ದ ಖದೀಮರು!

ಎಸಿಬಿ ಡಿವೈಎಸ್ಪಿ ವಾಸುದೇವ ರಾಮ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸಿಬಿ ಸಿಪಿಐ, ವೈ.ಎಸ್.ಧರ್ನಾಯಕ್, ಆರ್.ಎಫ್.ದೇಸಾಯಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಆರೋಪಿ ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.