ಗದಗ: ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಬೈಕ್ ಸವಾರ ನಾಗರಾಜ್ (32) ಮೃತ. ನಾಗರಾಜ್ ಬಳ್ಳಾರಿ ಜಿಲ್ಲೆ ಹಡಗಲಿ ತಾಲೂಕಿನ ನವಲೆ ಗ್ರಾಮದವನೆಂದು ತಿಳಿದುಬಂದಿದ್ದು, ನೀರಾವರಿ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಇಂದು ಕೆಲಸಕ್ಕೆ ತೆರಳುವಾಗ ಈ ಘಟನೆ ನಡೆದಿದೆ. ಅಪಘಾತ ನಂತರ ಲಾರಿ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಮುಂಡರಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.