ಗದಗ: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ''ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ'' ಕಾರ್ಯಕ್ರಮದ ನೇರ ಪ್ರಸಾರವನ್ನು ಜಿಲ್ಲಾಡಳಿತ ಭವನದಲ್ಲಿ ವೀಕ್ಷಿಸಲಾಯಿತು.
ಈ ವೇಳೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಬಿಜೆಪಿ ಸರ್ಕಾರದ ವರ್ಷದ ಸಾಧನೆ ಪುಸ್ತಕ ಬಿಡುಗಡೆ ಮಾಡಿದರು. ವಾರ್ತಾ ಇಲಾಖೆಯ ಜನಪದ, ಮಾರ್ಚ್ ಆಫ್ ಕರ್ನಾಟಕ ವಿಶೇಷ ಸಂಚಿಕೆಗಳನ್ನು ನೇರ ಪ್ರಸಾರ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಚಿವ ಸಿ.ಸಿ ಪಾಟೀಲ್ ರಾಜ್ಯ ಸರ್ಕಾರ ಸಾಗಿ ಬಂದ ದಾರಿ, ಅಭಿವೃದ್ಧಿಯ ಹೋರಾಟಗಳನ್ನು ಮೆಲುಕು ಹಾಕಿದರು.
ಈ ವೇಳೆ ಜಿಲ್ಲೆಯ ಶಾಸಕರುಗಳಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ, ಅಪರ ಜಿಲ್ಲಾಧಿಕಾರಿ ಸತೀಶ್‍ಕುಮಾರ ಎಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಗದಗ ಜಿಲ್ಲೆಯ ವಿವಿಧ ಯೋಜನೆಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.