ಗದಗ: ಜಿಲ್ಲೆಯ ನರಗುಂದ ತಾಲೂಕಿನ ಲಕಮಾಪೂರ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಎಚ್ಚರಿಕೆ ನಿಡಲಾಗಿದ್ದು. ಈ ಎರಡೂ ಗ್ರಾಮದ ಗ್ರಾಮಸ್ಥರು ಬೇರೆಡೆ ಸ್ಥಳಾಂತರಗೊಳ್ಳಲು ತಿಳಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಗ್ರಾಮಸ್ಥರ ಸ್ಥಳಾಂತರಕ್ಕೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು ಮಲಪ್ರಭಾ ಹಾಗೂ ನವೀಲು ತೀರ್ಥ ಜಲಾಶಯ ಗರಿಷ್ಠ ಮಟ್ಟ ತಲುಪುವುದರಲ್ಲಿದೆ. ಹಾಗಾಗಿ ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನದಿಗೆ ನೀರು ಹರಿಬಿಡಲಾಗುವುದು. ಆದ್ದರಿಂದ ನದಿ ದಡದ ಮೇಲಿರುವ ಗ್ರಾಮಗಳಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಜೊತೆಗೆ ನರಗುಂದ ಶಾಸಕ ಸಿಸಿ ಪಾಟೀಲ್ ಸಹ ಬಿಜೆಪಿ ಕಾರ್ಯಕರ್ತರ ವಾಟ್ಸ್ಆ್ಯಪ್ ಗ್ರೂಪ್ ಮೂಲಕ ಜನರಿಗೆ ಮಾಹಿತಿ ಹಂಚಿಕೊಂಡು ಗ್ರಾಮದ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.