ಗದಗ: ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಾಧಿಕರಣ ನೀಡಿದ ತೀರ್ಪನ್ನು ಜಾರಿಗೊಳಿಸಬೇಕೆಂಬ ಕರ್ನಾಟಕದ ಮನವಿಗೆ ಸುಪ್ರೀಂಕೋರ್ಟ್ ಮನ್ನಣೆ ನೀಡಿದೆ. ರಾಜ್ಯಕ್ಕೆ ಸಿಕ್ಕ ಮಹದಾಯಿ ಗೆಲುವಿನ ಹಿನ್ನೆಲೆಯಲ್ಲಿ ನಗರದ ಮಹಾತ್ಮಾ ಗಾಂಧಿ ವೃತ್ತ ಹಾಗೂ ನರಗುಂದ ಪಟ್ಟಣದಲ್ಲಿ ರೈತರು ವಿಜಯೋತ್ಸವ ಆಚರಿಸಿದರು.
ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರರು ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಿವಿಧ ರೈತಪರ ಸಂಘಟನೆಗಳು ಈ ಭಾಗದಲ್ಲಿ ಇಂದಿಗೆ 1680 ದಿನಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿವೆ.
ನದಿ ನೀರು ಹಂಚಿಕೆ ಯೋಜನೆ ಜಾರಿಗಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಇಂದು ಗೆಜೆಟ್ ನೋಟಿಪಿಕೆಷನ್ ವಿಚಾರವಾಗಿ ರಾಜ್ಯಕ್ಕೆ ಸಿಹಿ ಸುದ್ದಿ ಬಂದಿದೆ ಎಂದು ಹೋರಾಟಗಾರರು ಸಂತಸ ವ್ಯಕ್ತಪಡಿಸಿದರು.