ETV Bharat / state

ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​​ಟಾಪ್ ವಿತರಿಸಿದ ಸಿ.ಸಿ.ಪಾಟೀಲ್​​​ - ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ

ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​​ಟಾಪ್ ವಿತರಣೆ ಮಾಡಿದರು.

Minister C.C Patil
ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಿದ ಸಚಿವ ಸಿ.ಸಿ. ಪಾಟೀಲ್
author img

By

Published : Feb 24, 2020, 7:44 PM IST

ಗದಗ: ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​​ಟಾಪ್ ವಿತರಣೆ ಮಾಡಿದರು.

ಗದಗ ಜಿಲ್ಲೆಯ ನರಗುಂದ ಪಟ್ಟಣದ ಶ್ರೀ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತವಾಗಿ ಲ್ಯಾಪ್​ಟಾಪ್ ವಿತರಣೆ ಮಾಡಿದರು. ಲ್ಯಾಪ್​​​​ಟ್ಯಾಪ್​​​​ ವಿತರಣೆ ಕಾರ್ಯಕ್ರಮದಲ್ಲಿ ಅವ್ಯವಸ್ಥೆ ಕಂಡು ಬಂದ ಹಿನ್ನೆಲೆ ಕಾರ್ಯಕ್ರಮ ಆಯೋಜನೆ ಮಾಡಿದ ಕಾಲೇಜು ಆಡಳಿತ ಮಂಡಳಿ ಹಾಗೂ ಸಚಿವ ಸಿ.ಸಿ.ಪಾಟೀಲ್ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಿದ ಸಚಿವ ಸಿ.ಸಿ. ಪಾಟೀಲ್

ಸೌಜನ್ಯಕ್ಕೂ ಪೆಂಡಾಲ್ ಹಾಕದೇ ಇರುವು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಕಾರ್ಯಕ್ರಕ್ಕೆ ಗಮಿಸಿದ ಜನ್ರು ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ ಸಚಿವ ಸಿ.ಸಿ.ಪಾಟೀಲ್, ವಿದ್ಯಾರ್ಥಿ ನಿಲಯ ಹಾಗೂ ಊಟದ ಕೋಣೆ ಉದ್ಘಾಟನೆ ಮಾಡಿ, ವಿದ್ಯಾರ್ಥಿಗಳ ವಸತಿ ನಿಲಯದ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಸರ್ಕಾರದಿಂದ 500 ಲ್ಯಾಪ್‌ಟಾಪ್ ಬಂದಿದ್ದು, ಇಂದು ಸಾಂಕೇತಿಕವಾಗಿ ವಿತರಣೆ ಮಾಡಲಾಗಿದೆ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್‌ಟಾಪ್ ಬಂದಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳು ನಮಗೆ ಲ್ಯಾಪ್‌ಟಾಪ್ ಸಿಕ್ಕಿಲ್ಲವೆಂದು ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಶಿಕ್ಷಣ ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ಸಚಿವರು ತಿಳಿಸಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.