ETV Bharat / state

ಅಧಿಕಾರಿಗಳು ಕಾನೂನು ಬಾಹಿರವಾಗಿ ವರ್ತಿಸಿ ಕಾಂಗ್ರೆಸ್​​ಗೆ ಅನ್ಯಾಯ ಮಾಡಿದ್ದಾರೆ: ಎಚ್ ಕೆ ಪಾಟೀಲ್

ನಾಲ್ವರು ಸದಸ್ಯರ ಹೆಸರು ಮತದಾರರ ಪಟ್ಟಿಗೆ ಸೇರಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಎಚ್​ ಕೆ ಪಾಟೀಲ್​ ಅವರು, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಕಾನೂನಾತ್ಮಕ ಅರ್ಹತೆ ಇದ್ದರೂ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಗದಗನಲ್ಲಿ ಶಾಸಕ ಎಚ್ ಕೆ ಪಾಟೀಲ್​ ಹೇಳಿಕೆ
ಗದಗನಲ್ಲಿ ಶಾಸಕ ಎಚ್ ಕೆ ಪಾಟೀಲ್​ ಹೇಳಿಕೆ
author img

By

Published : Jan 24, 2022, 6:08 PM IST

ಗದಗ : ಪಕ್ಷದ ಮೂವರು ವಿಧಾನ ಪರಿಷತ್ ಸದಸ್ಯರು, ಓರ್ವ ರಾಜ್ಯಸಭಾ ಸದಸ್ಯ, ಗದಗ ಮತದಾರರಾಗಲು‌ ಒಲವು ತೋರಿಸಿದ್ದರು. ಆದರೆ, ಅಧಿಕಾರಿಗಳು ಕಾನೂನು ಬಾಹಿರವಾಗಿ ವರ್ತಿಸಿ ಕಾಂಗ್ರೆಸ್​​ಗೆ ಅನ್ಯಾಯ ಮಾಡಿದ್ದಾರೆ ಎಂದು ಶಾಸಕ ಎಚ್.ಕೆ. ಪಾಟೀಲ್ ಆರೋಪಿಸಿದ್ದಾರೆ.

ಗದಗನಲ್ಲಿ ಶಾಸಕ ಎಚ್ ಕೆ ಪಾಟೀಲ್​ ಹೇಳಿಕೆ

ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ‌ಮಾಧ್ಯಮ‌ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಕೆಲವರ ಅರ್ಜಿ ಅಲ್ಲಗಳೆಯಲು ಅಧಿಕಾರಿಗಳಿಗೆ ಯಾವುದೇ ವೈಯಕ್ತಿಕ ಕಾರಣವಿಲ್ಲ. ಆದರೆ, ಸರ್ಕಾರದ ಒತ್ತಡವೇ ಇದಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ನಾಲ್ವರು ಸದಸ್ಯರ ಹೆಸರು ಮತದಾರರ ಪಟ್ಟಿಗೆ ಸೇರಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಕಾನೂನಾತ್ಮಕ ಅರ್ಹತೆ ಇದ್ದರೂ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ. ಹೊರಗಿನವರನ್ನು ಕರೆತಂದು ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಬಿಜೆಪಿಯ ಪರಿಪಾಟ. ಈ ಹಿಂದೆ ಕಲಬುರಗಿ, ಬೆಂಗಳೂರು, ದಾವಣಗೆರೆಯಲ್ಲಿ ಹೀಗೆ ಮಾಡಿದ್ದು ಯಾರು?. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರನ್ನು ಹುಬ್ಬಳ್ಳಿಯಲ್ಲಿ ಯಾಕೆ ಮತದಾರರನ್ನಾಗಿ ಮಾಡಿದರು ಎಂದು ಪ್ರಶ್ನಿಸಿದ ಎಚ್​ ಕೆ ಪಾಟೀಲ್​, ಬಿಜೆಪಿಯ ನಡೆಯನ್ನು ನಾವು ಗಮನಿಸುತ್ತಿದ್ದೇವೆ ಎಂದು ಹೇಳಿದರು.

ಗದಗ-ಬೆಟಗೇರಿ‌ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆದ್ದಿದ್ದು, ಇಬ್ಬರು ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಪಕ್ಷೇತರ ಸದಸ್ಯರು ಕಾಂಗ್ರೆಸ್​ ಪಕ್ಷ ಸೇರ್ಪಡೆಗೊಂಡಿದ್ದಾರೆ. ನಾನು ಸೇರಿದಂತೆ 18 ಸಂಖ್ಯಾಬಲ ಹೊಂದಿದ್ದೇವೆ. ಬಿಜೆಪಿ ಓರ್ವ ಸಂಸದ, 18 ಸದಸ್ಯರನ್ನೊಳಗೊಂಡಂತೆ 19 ಸಂಖ್ಯಾಬಲ ಹೊಂದಿದೆ. ಹಾಗಾಗಿ ಇವತ್ತು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.