ETV Bharat / state

ಹೆಚ್ಚುತ್ತಿರುವ ಕೋವಿಡ್​ ಪ್ರಕರಣ: ಮುಂಡರಗಿ ಪಟ್ಟಣ ಸ್ವಯಂ ಪ್ರೇರಿತ ಬಂದ್

author img

By

Published : Jun 29, 2020, 12:31 PM IST

ಮುಂಡರಗಿ ಪಟ್ಟಣದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಗ್ರಾಮದ ಹಿರಿಯರು ಹಾಗೂ ವ್ಯಾಪಾರಿಗಳು ಸೇರಿ ಪಟ್ಟಣವನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ.

Mundaragi
ಹೆಚ್ಚುತ್ತಿರುವ ಕೋವಿಡ್​: ಮುಂಡರಗಿ ಪಟ್ಟಣ ಸ್ವಯಂ ಪ್ರೇರಿತ ಬಂದ್

ಗದಗ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮುಂಡರಗಿ ಪಟ್ಟಣವನ್ನು ಸ್ಥಳೀಯರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಜೂ.28ರಂದು ಒಂದೇ ದಿನ 29 ಪಾಸಿಟಿವ್ ಕೇಸ್​ಗಳು ಮುಂಡರಗಿ ಪಟ್ಟಣದಲ್ಲಿ ಕಾಣಿಸಿಕೊಂಡಿದ್ದರಿಂದ ಜನರು ಭಯಭೀತರಾಗಿದ್ದಾರೆ. ಈವರೆಗೆ ಸುಮಾರು 42 ಪಾಸಿಟಿವ್​ ಪ್ರಕರಣಗಳು ಕಾಣಿಸಿಕೊಂಡಿವೆ. ಹೀಗಾಗಿ ಅಲ್ಲಿನ ಜನ ಸ್ವಯಂ ಪ್ರೇರಣೆಯಿಂದ ಪಟ್ಟಣವನ್ಬ ಬಂದ್ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ಮಾಡಲು ಅವಕಾಶಕ್ಕೆ ತೀರ್ಮಾನಿಸಲಾಗಿದೆ. ಪಟ್ಟಣದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಹಿರಿಯರು ಹಾಗೂ ವ್ಯಾಪಾರಸ್ಥರು ಈ ಮಹತ್ವದ ನಿರ್ಧಾರಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ತಹಶೀಲ್ದಾರ್​ ಗಮನಕ್ಕೆ ತಂದು ಇಂದಿನಿಂದ ಬಂದ್ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಗ್ರೀನ್ ಝೋನ್​ಗೆ ಮರಳಿದ್ದ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ತೆರುವಾದ ಬಳಿಕ ಅಷ್ಟೇನು ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿರಲಿಲ್ಲ. ಆದರೆ ಕಳೆದ ಒಂದೇ ವಾರದಲ್ಲಿ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದ್ದು, ಸದ್ಯ ಗದಗ ಜಿಲ್ಲೆಯಲ್ಲಿ ಈವರೆಗೆ ಒಟ್ಟು 170 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಇದರಲ್ಲಿ ಮುಂಡರಗಿ ತಾಲೂಕಿನಲ್ಲಿಯೇ ಅತೀ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.