ಗದಗ: ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಚಾಲನೆ ನೀಡಿದ್ರು.
ಕಾರ್ಯಕ್ರಮದಲ್ಲಿ ಜನವರಿ ತಿಂಗಳಲ್ಲಿ ಹುಟ್ಟಿದ ಹೆಣ್ಣು ಮಕ್ಕಳ ಹುಟ್ಟುಹಬ್ಬವನ್ನ ಕೇಕ್ ಕಟ್ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಅಲ್ಲದೇ, ಹೆಣ್ಣು ಮಗುವನ್ನು ರಕ್ಷಿಸಿ, ಕಾಪಾಡಿ, ಪೋಷಣೆ ಮಾಡಬೇಕು ಎಂದು ಪ್ರಮಾಣ ವಚನ ಭೋಧಿಸಲಾಯಿತು.
ಲಂಬಾಣಿ ವೇಷಭೂಷಣ ತೊಟ್ಟು ಶಾಲಾ ಮಕ್ಕಳು ಹೆಣ್ಣು ಮಗುವಿನ ರಕ್ಷಣೆ ಬಗ್ಗೆ ಮಾಡಿದ ನೃತ್ಯ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಮಹಿಳೆಯರು, ಮಕ್ಕಳು ಸೇರಿ ನೂರಾರು ಜನ ಭಾಗಿಯಾಗಿದ್ರು.