ಗದಗ: ಜಿಲ್ಲೆಯ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ಬಟ್ಟೆಯಲ್ಲಿ ಸುತ್ತಿದ ನವಜಾತ ಶಿಶುವೊಂದು ಪತ್ತೆಯಾಗಿದ್ದು, ಗಂಡು ಮಗುವನ್ನು ಬಿಟ್ಟು ಪಾಪಿಗಳು ನಾಪತ್ತೆಯಾಗಿದ್ದಾರೆ.
ಹಸಿವಿನಿಂದ ಅಳುತ್ತಿದ್ದ ಹಸುಗೂಸನ್ನು ಗಜೇಂದ್ರಗಡ ಪೊಲೀಸರು ರಕ್ಷಿಸಿದ್ದಾರೆ. ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ತಡ ರಾತ್ರಿ ಮಗು ಅಳುವ ಧ್ವನಿ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು ಎನ್ನಲಾಗಿದೆ. ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.