ಗದಗ: ಸರ್ಕಾರಿ ಆಸ್ಪತ್ರೆಗಳು ಅಂದ್ರೆ ಬಡವರ ಪಾಲಿಗೆ ಸಂಜಿವಿನಿ. ಆದರೆ, ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಮಾತ್ರ ರೋಗಿಗಳಿಗೆ ನರಕವಾಗಿ ಮಾರ್ಪಟ್ಟಿದೆ.
ಹೌದು.. ಈ ಆಸ್ಪತ್ರೆಗೆ ಬರೋ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ಗಳು ಇಲ್ಲ. ನೆಲದ ಮೇಲೆ ಮಲಗಿಸಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇದರ ಕುರಿತಾಗಿ ಈಟಿವಿ ಭಾರತ ಈಗಾಗಲೇ ಸುದ್ದಿಯನ್ನು ಪ್ರಸಾರ ಮಾಡಿತ್ತು. ಆದರೆ ಈವರೆಗೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸಿಲ್ಲ.
ವೈದ್ಯಕೀಯ ಕ್ಷೇತ್ರ ಅಭಿವೃದ್ಧಿಯಾಗುತ್ತಿದ್ದರೂ ಜಿಲ್ಲೆಯಲ್ಲಿ ಮಾತ್ರ ಈ ಆಸ್ಪತ್ರೆ ನರಕ ದರ್ಶನವನ್ನು ಮಾಡಿಸುತ್ತಿದೆ. ಈ ಬಗ್ಗೆ ಸಾರ್ವಜನಿಕರು ಮೇಲಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.