ಗದಗ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪ್ರತಿ ಭಾನುವಾರ ವಿಧಿಸಿದ್ದ ಕರ್ಫ್ಯೂವನ್ನು ರಾಜ್ಯ ಸರ್ಕಾರ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ.
ಜಿಲ್ಲೆಯಲ್ಲಿ ಯಥಾಪ್ರಕಾರ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ವ್ಯಾಪಾರ ವಹಿವಾಟು ಎಂದಿನಂತೆ ಸಾಗಿದೆ. ಇನ್ನು ಸಾರಿಗೆ ಸಂಚಾರಕ್ಕೂ ವಿನಾಯಿತಿ ನೀಡಿದ್ದರಿಂದ ಸರ್ಕಾರಿ, ಖಾಸಗಿ ವಾಹನಗಳ ಓಡಾಟಕ್ಕೆ ಯಾವುದೇ ತೊಂದರೆಯುಂಟಾಗಿಲ್ಲ. ಜನರು ಅಂಗಡಿ ಮುಂಗಟ್ಟುಗಳಿಗೆ ತೆರಳಿ ವ್ಯಾಪಾರ ಮಾಡುವ ದೃಶ್ಯಗಳು ಕಂಡುಬಂದವು.