ಗದಗ: ಇಲ್ಲಿವರೆಗೂ ಜಿಲ್ಲೆಯಲ್ಲಿ 234 ಜನರ ಮೇಲೆ ನಿಗಾ ವಹಿಸಲಾಗಿದೆ. ಯಾರಲ್ಲೂ ಕೊರೊನಾ ಪಾಸಿಟಿವ್ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಇದರಲ್ಲಿ 28 ದಿನಗಳ ನಿಗಾ ಅವಧಿ ಪೂರೈಸಿದವರು 32 ಜನರು ಇದ್ದಾರೆ. ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರು 195 ಜನರಿದ್ದಾರೆ. ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ 7 ಜನರ ಮೇಲೆ ನಿಗಾ ವಹಿಸಲಾಗಿದೆ.