ಗದಗ: ಕ್ವಾರಂಟೈನ್ ಕೇಂದ್ರದಲ್ಲಿ ರಾತ್ರಿಯಿಡೀ ಕರೆಂಟ್ ಇಲ್ಲದೆ ರೋಗಿಗಳು ಪರದಾಡಿದ ಘಟನೆ ನಗರದ ಹೊರವಲಯದಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.
ವಿದ್ಯುತ್ ಸೌಲಭ್ಯವಿಲ್ಲದೆ ಕೊರೊನಾ ಸೋಂಕಿತರು ಸಂಕಷ್ಟ ಅನುಭವಿಸಿದ್ದಾರೆ. ಇತ್ತೀಚೆಗೆಯಷ್ಟೇ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಕೋವಿಡ್ ಕೇರ್ ಸೆಂಟರ್ನಲ್ಲಿ ಸ್ವಚ್ಛತೆ ಮತ್ತು ಭದ್ರತೆಯನ್ನು ಕಾಯ್ದುಕೊಳ್ಳುವಂತೆ ಸೂಚಿಸಿದ್ದರು.
ಆದರೆ ಜಿಮ್ಸ್ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿ ಎರಡು ದಿನಗಳಿಂದ ಕರೆಂಟ್ ಇಲ್ಲದೆ ರೋಗಿಗಳಿಗೆ ಔಷಧಿ ತೆಗೆದುಕೊಳ್ಳಲು ಕಷ್ಟವಾಗುತ್ತಿದೆ. ಸೋಂಕಿತರು ಆದಷ್ಟು ಬೇಗ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.