ಗದಗ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಪಲ್ಟಿಯಾಗಿ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ ಘಟನೆ ಗದಗನಲ್ಲಿ ನಡೆದಿದೆ.
ಗದಗ ತಾಲೂಕಿನ ಕೋಟುಮಚಗಿ ಗ್ರಾಮದ ಅಬ್ಬಿಗೇರಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ರೋಣದಿಂದ ಗದಗ ಕಡೆಗೆ ಬರುತ್ತಿದ ಕಾರು ಅಪಘಾವಾತ ಕೂಡಲೇ ಸ್ಥಳದಿಂದ ಗಾಯಾಳುಗಳು ನಾಪತ್ತೆಯಾಗಿದ್ದಾರೆ. ಗಾಯಾಳುಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಈ ಸುದ್ದಿಯನ್ನೂ ಓದಿ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ಧಗ ಧಗನೇ ಹೊತ್ತಿ ಉರಿದ ವಾಹನ
ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಸದ್ಯ ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.