ಗದಗ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವಿಗೀಡಾಗಿ, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ. ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಹೊರ ವಲಯದಲ್ಲಿ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಕಾರು ಮತ್ತು ಬೈಕ್ ಬೆಂಕಿ ಹೊತ್ತಿಕೊಂಡು ಸುಟ್ಟುಹೋಗಿವೆ. ಹುಬ್ಬಳ್ಳಿಯಿಂದ ಕೊಣ್ಣೂರು ಕಡೆಗೆ ಹೊರಟ ಬೈಕ್ ಹಾಗೂ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಕಾರಿನಲ್ಲಿದ್ದವರು ಹೊರಗಿಳಿದು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರ ಗಾಯಗೊಂಡು ಒದ್ದಾಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ವ್ಯಕ್ತಿ ಹಾಗೂ ಗಾಯಾಳುಗಳ ಹೆಸರು ತಿಳಿದು ಬಂದಿಲ್ಲ.
ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದವರು ಹೊತ್ತಿ ಉರಿಯುತ್ತಿದ್ದ ಬೈಕ್ ಮತ್ತು ಕಾರುಗಳ ಬೆಂಕಿ ನಂದಿಸಿದ್ದಾರೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ